Micro finance-ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Micro finance-ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Kadaba Times News
0

ಕಡಬ ಟೈಮ್, ಪ್ರಮುಖ ಸುದ್ದಿ:  ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರಕಾರ ಸಹಿಸುವುದಿಲ್ಲʼ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 



ಮೈಕ್ರೋ ಫೈನಾನ್ಸ್ ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ?  ಅಂತಹ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿʼ ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ. 


ಆರ್ಬಿಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು' ಎಂದು ಮೈಕ್ರೋ ಕಂಪನಿಯ ಪ್ರತಿನಿಧಿಗಳು ಸಮರ್ಥನೆ ನೀಡಿದರುಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ.  ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಹೇಳಿದರು. 


ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top