




ಕಡಬ ಟೈಮ್ಸ್, ಕಾಣಿಯೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್-2025ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ಅಬೀರ ಆಯ್ಕೆ ಆಗಿದ್ದಾರೆ.
ಕಾಣಿಯೂರಿನ ಸೌಮ್ಯ ಪೂಜಾರಿ ಅಬೀರ(KADABA TIMES)
ಪ್ರಸ್ತುತ
ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿರುವ ಇವರು ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿದ್ದಾರೆ.
ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾಧ್ಯಮ ಶಾಲೆ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುವ ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಪುತ್ರಿ .