ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಎಗರಿಸಿದ ಬುರ್ಕಾಧಾರಿ ಮಹಿಳೆಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಎಗರಿಸಿದ ಬುರ್ಕಾಧಾರಿ ಮಹಿಳೆಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

Kadaba Times News
0

 ಕಡಬ ಟೈಮ್ಸ್,(KADABA TIMES): ಉಪ್ಪಿನಂಗಡಿಯ  ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಕಳೆದ ಎಪ್ರಿಲ್ 17 ರಂದು ಗ್ರಾಹಕರ ಸೋಗಿನಲ್ಲಿ ಬಂದ  ಬುರ್ಕಾಧಾರಿ ಮಹಿಳೆಯೊಬ್ಬರು ಒಟ್ಟು 72 ಗ್ರಾಮ್ ತೂಕದ 4.80 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಎಗರಿಸಿದ ಘಟನೆಗೆ ಸಂಬಂಧಿಸಿ ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

K


ದಿನಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಎಂಬ ಚಿನ್ನಾಭರಣ ಅಂಗಡಿಗೆ ಎ.17 ರ ಗುರುವಾರದಂದು ಮಧ್ಯಾಹ್ನದ ವೇಳೆ  ಗ್ರಾಹಕರ ಸೋಗಿನಲ್ಲಿ ಬಂದ ಬುರ್ಕಾಧಾರಿ ಮಹಿಳೆಯೊಬ್ಬರು ಮದುವೆ ಕಾರ್ಯಕ್ರಮಕ್ಕೆ 30 ಗ್ರಾಮ್ ಚಿನಾಭರಣ ಬೇಕಾಗಿದೆ. ನನ್ನ ಮನೆಯವರು ನಾಳೆ ಬಂದು ಹಣಕೊಟ್ಟು ಚಿನ್ನಾಭರಣವನ್ನು ತೆಗೆದುಕೊಳ್ಳುತ್ತಾರೆ. ನಾನೀಗ ಚಿನ್ನಾಭರಣವನ್ನು ಸೆಲೆಕ್ಟ್ ಮಾಡಿ ಹೋಗುತ್ತೇನೆ ಎಂದು ತಿಳಿಸಿದ್ದು, ಅಲ್ಲಿನ ಸಿಬ್ಬಂದಿ ಬೇರೆ ಬೇರೆ ನಮೂನೆಯ ಚಿನ್ನಾಭರಣವನ್ನು ಟ್ರೇಯಲ್ಲಿಟ್ಟು ತೋರಿಸಿದ್ದಾರೆ. ಅದರಲ್ಲಿನ ಕೆಲವೊಂದು ಆಭರಣವನ್ನು ಗುರುತಿಸಿ, ನಾಳೆ ದಿನ ನನ್ನ ಮನೆಯವರು ಬಂದು ಹಣಕೊಟ್ಟು ಈ ಎಲ್ಲಾ ಆಭರಣವನ್ನು ಖರೀದಿಸುತ್ತಾರೆ ಎಂದು ತಿಳಿಸಿ ಹೋಗಿದ್ದರು.


ರಾತ್ರಿ ವೇಳೆ ಎಂದಿನಂತೆ ಚಿನ್ನಾಭರಣದ ಸ್ಟಾಕ್ ಚೆಕ್ ಮಾಡುವ ವೇಳೆ ಆಭರಣದ ಕೊರತೆ ಕಂಡು ಬಂದಿದ್ದು, ಪರಿಶೀಲನೆಯ ವೇಳೆ 24 ಗ್ರಾಮ್ ತೂಕದ ಚಿನ್ನದ ಕಾಲ್ ಚೈನ್ 2 ಜೊತೆ, 8 ಗ್ರಾಮ್ ತೂಕದ ಚಿನ್ನದ ಬ್ರಾಸ್ ಲೈಟ್ ಒಂದು, 16 ಗ್ರಾಮ್ ತೂಕದ ಚಿನ್ನದ ಸರ ಒಂದು ಹೀಗೆ ಒಟ್ಟು 72 ಗ್ರಾಮ್ ತೂಕದ ಚಿನ್ನಾಭರಣವನ್ನು ಗ್ರಾಹಕರ ಸೋಗಿನಲ್ಲಿ ಬಂದ ಬುರ್ಕಾಧಾರಿ ಮಹಿಳೆ ಎಗರಿಸಿರುವುದು ಕಂಡು ಬಂದಿತ್ತು. ಎಗರಿಸಲ್ಪಟ್ಟ ಚಿನಾಭರಣದ ಮೌಲ್ಯ 4.80 ಲಕ್ಷ ಎಂದು ದೂರಲಾಗಿತ್ತು.


ಉಪ್ಪಿನಂಗಡಿಯಲ್ಲೇ ಮಾರಾಟಕ್ಕೆ ಯತ್ನ: ಚಿನ್ನಾಭರಣ ಮಳಿಗೆಯಿಂದ ಎಗರಿಸಿದ ಚಿನ್ನಾಭರಣವನ್ನು  ಅಲ್ಲೇ ಸಮೀಪದ ಇನ್ನೊಂದು  ಚಿನ್ನಾಭರಣ ಅಂಗಡಿಗೆ ತಂದು ಮಾರಾಟಕ್ಕೆ ಯತ್ನಿಸಿದಾಗ ಆರೋಪಿ ಮಹಿಳೆ ಸಿಕ್ಕಿ ಬಿದ್ದಿದ್ದಾರೆ .ಸಂಶಯಗೊಂಡ ಆಭರಣ ಅಂಗಡಿ ಮಾಲಕ ಪೊಲೀಸರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ಕಳವು ಕೃತ್ಯವನ್ನು ಒಪ್ಪಿಕೊಂಡಿರುತ್ತಾಳೆ. ಆರೋಪಿಯನ್ನು ಆಷತ್ ಶಮೀಲಾಬಿ ಎಂದು ಗುರುತಿಸಲಾಗಿದೆ. ಆರೋಪಿತೆಯ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top