Big Breaking -ಕಡಬ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ; ಕಾರಿನೊಳಗೆ ಸಿಲುಕಿದ್ದ ಮಗು ಸಹಿತ ನಾಲ್ವರನ್ನು ಹರಸಾಹಸ ಪಟ್ಟು ರಕ್ಷಿಸಿದ ಸ್ಥಳೀಯರು

Kadaba Times News

ಕಡಬ ಟೈಮ್ಸ್, ಪ್ರಮುಖ ಸುದ್ದಿ:  ಪೆರಿಯಶಾಂತಿಯನ್ನು ಸಂಪರ್ಕಿಸುವ ಹೆದ್ದಾರಿಯ ನೂಜಿಬಾಳ್ತಿಲ ಸಮಿಪ್ದ ಕನ್ವಾರೆ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡು ಅಸ್ಪತ್ರೆಗೆ ದಾಖಲಾದ ಘಟನೆ ಮೆ. ೨೫ ರ ಮಧ್ಯಾಹ್ನ ನಡೆದಿದೆ.



ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು (ಕೆಎ14ಎಂಬಿ0226) ಇದಾಗಿದೆ ಘಟನೆಯಲ್ಲಿ  ಕಾರಿನಲ್ಲಿದ್ದ ಚಾಲಕ, ಇಬ್ಬರು ಮಹಿಳೆಯರು,  ಒಂದು ಮಗು ಕಾರಿನಲ್ಲಿ ಸಿಲುಕಿಕೊಂಡಿದ್ದು ಸ್ಥಳೀಯರು ಕಾರ್ಯಾಚರಣೆ ನಡೆಸಿ ಸಿಲುಕಿದ್ದ ಗಾಯಾಳುಗಳನ್ನು ಹೊರ ತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ.


ಸ್ಥಳದಲ್ಲಿದ್ದವರ ಮಾಹಿತಿ ಪ್ರಕಾರ  ಕಾರಿನಲ್ಲಿದ್ದವರ ಮುಖ, ಮೈ-ಕೈಗೆ ತೀವ್ರ ತರಹದ ರಕ್ತ ಗಾಯವಾಗಿದೆ ಎಂದು ತಿಳಿದು ಬಂದಿದೆ. ಈ ರಸ್ತೆಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಮರ ತೆರವಿಗೆ ಸಹಕರಿಸಿದ್ದಾರೆ.ಕಾರಿನಲ್ಲಿದ್ದವರ ವಿವರ ಇನ್ನಷ್ಟೇ ಲಭಿಸಬೇಕಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top