ಕುಕ್ಕೆ ದೇಗುಲದ ನೂತನ ವ್ಯವಸ್ಥಾಪನ ಸಮಿತಿಯ ನಿರ್ಧಾರ: ಭಕ್ತರಿಗೆ ಸಿಗಲಿದೆ ಬೆಳಗಿನ ಉಪಾಹಾರ

ಕುಕ್ಕೆ ದೇಗುಲದ ನೂತನ ವ್ಯವಸ್ಥಾಪನ ಸಮಿತಿಯ ನಿರ್ಧಾರ: ಭಕ್ತರಿಗೆ ಸಿಗಲಿದೆ ಬೆಳಗಿನ ಉಪಾಹಾರ

Kadaba Times News

ಕ್ಷೇತ್ರದಲ್ಲಿ ಈಗಾಗಲೇ ಮಧ್ಯಾಹ್ನ ಹಾಗೂ ರಾತ್ರಿಯ ಭೋಜನ ಪ್ರಸಾದ ವಿತರಿಸಲಾಗುತ್ತಿದೆ. ದಿನಂಪ್ರತಿ ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸುತ್ತಿದ್ದಾರೆ. ಬೆಳಗಿನ ಉಪಾಹಾರ ಯೋಜನೆಯಿಂದ ಭಕ್ತರಿಗೆ ಇನ್ನಷ್ಟು ಪ್ರಯೋಜನವಾಗಲಿದೆ.

ಕಡಬ ಟೈಮ್ಸ್, ಕುಕ್ಕೆ ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ವಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವಸ್ಥಾನದ ವತಿಯಿಂದ ಭಕ್ತರಿಗೆ ಬೆಳಗಿನ ಉಪಾಹಾರ ನೀಡುವ ಬಗ್ಗೆ ದೇಗುಲದ ನೂತನ ವ್ಯವಸ್ಥಾಪನ ಸಮಿತಿ ಯೋಜನೆ ರೂಪಿಸಿದೆ.

ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಶೀಘ್ರ ಭಕ್ತರಿಗೆ ಬೆಳಗ್ಗಿನ ಹೊತ್ತು ಉಪಾಹಾರ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಮೆನು, ಸಮಯದ ಬಗ್ಗೆ ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರವನ್ನು ವ್ಯವಸ್ಥಾಪನ ಸಮಿತಿ ಕೈಗೊಳ್ಳಲಿದ್ದು, ಬಳಿಕ ಈ ಹೊಸ ಯೋಜನೆ ಅನುಷ್ಠಾನಕ್ಕೆ ಬರಲಿದೆ.

ಕ್ಷೇತ್ರದಲ್ಲಿ ಈಗಾಗಲೇ ಮಧ್ಯಾಹ್ನ ಹಾಗೂ ರಾತ್ರಿಯ ಭೋಜನ ಪ್ರಸಾದ ವಿತರಿಸಲಾಗುತ್ತಿದೆ. ದಿನಂಪ್ರತಿ ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸುತ್ತಿದ್ದಾರೆ. ಬೆಳಗಿನ ಉಪಾಹಾರ ಯೋಜನೆಯಿಂದ ಭಕ್ತರಿಗೆ ಇನ್ನಷ್ಟು ಪ್ರಯೋಜನವಾಗಲಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top