ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ:ವಾಹನ ಸಂಚಾರಕ್ಕೆ ಅಡಚಣೆ

ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ:ವಾಹನ ಸಂಚಾರಕ್ಕೆ ಅಡಚಣೆ

Kadaba Times News

 ಕಡಬ ಟೈಮ್ಸ್, (KADABA TIMES)ನೆಲ್ಯಾಡಿ:  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲ ಮಣ್ಣು ಹಾಗೂ ಮರಗಳಿಂದ ಮುಚ್ಚಿಹೋಗಿದೆ. ಪ್ರದೇಶದಲ್ಲಿ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ  ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೆ ಕತ್ತರಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ . ಪರಿಣಾಮವಾಗಿ ಮಳೆ ಬರುತ್ತಿದ್ದಂತೆ ಮಣ್ಣು ಸಡಿಲಗೊಂಡು ಕುಸಿದು, ಹೆದ್ದಾರಿ ಬಂದ್ ಆಗುವ ಸ್ಥಿತಿ ನಿರ್ಮಾಣವಾಗಿದೆ.



ದೊಡ್ಡ ವಾಹನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದರೆ, ಕೆಲವು ಸಣ್ಣ ವಾಹನಗಳು ಕಿರಿದಾದ ಜಾಗದಲ್ಲಿ ಸಾಗುವ ಚಿತ್ರಣ ಕಂಡುಬಂದಿದೆ .  ಈ ರಸ್ತೆ ಅವಲಂಬಿಸಿರುವ ಸಾವಿರಾರು ಪ್ರಯಾಣಿಕರು ಹಾಗೂ ವಾಹನ ಸವಾರರು ಆತಂಕದಲ್ಲಿದ್ದಾರೆ.  ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟವರಿಂದ ಮಣ್ಣನ್ನು ತೆರೆವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.


ಈ ಮಾರ್ಗದ ಮೇಲೆ ನಿರಂತರವಾಗಿ ಅನಾಹುತಗಳು ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ. ಕಾಮಗಾರಿ ಗುಣಮಟ್ಟ, ಸುರಕ್ಷತಾ ಕ್ರಮಗಳ ಅವ್ಯವಸ್ಥೆ, ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯ ಕುರಿತು ಸಾರ್ವಜನಿಕ ಆಕ್ರೋಶ  ತೀವ್ರಗೊಂಡಿದೆ.


ಇನ್ನಷ್ಟು ಅನಾಹುತಗಳನ್ನು ತಪ್ಪಿಸಲು ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳೂ ಕೂಡ ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ, ತಾತ್ಕಾಲಿಕ ಮತ್ತು ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top