






ಕಡಬ ಟೈಮ್ಸ್ ,ಪ್ರಮುಖ ಸುದ್ದಿ,: ಪಟ್ಟಣ ಸುದ್ದಿ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಡಬ ಬಿಜೆಪಿ ಘಟಕದಿಂದ ಕಡಬ ಪಟ್ಟಣ ಪಂಚಾಯತ್ ಸೇರಿದಂತೆ ತಾಲೂಕಿನ ಹಲವು ಗ್ರಾಮಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.
ಕಡಬ ಪಟ್ಟಣ ಪಂಚಾಯತ್ ಕಚೇರಿಯ ಮುಂದೆ ನಡೆದ ಪ್ರತಿಭಟನೆಯಲ್ಲಿ
ಕಡಬ ಮಹಾಶಕ್ತಿ ಕೇಂದ್ರ ಅಧ್ಯಕ್ಷರದ ಪ್ರಕಾಶ್ ಎನ್. ಕೆ ಪ್ರಸ್ತಾವಿಸಿ ಸ್ವಾಗತಿಸಿದರು, ಬಿ ಜೆ ಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೃಷ್ಣ ಶೆಟ್ಟಿ
ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು . ಬಿಜೆಪಿ
ಹಿರಿಯ ಮುಖಂಡ ಸತೀಶ್ ನಾಯಕ್ , ಕಡಬ ಮಹಾ
ಶಕ್ತಿ ಕೇಂದ್ರದ ಕಾರ್ಯದರ್ಶಿ ಅಶೋಕ್ ಸೇರಿದಂತೆ ವಿವಿಧ ಮೋರ್ಚಾಗಳ ಪಧಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
9/11 ನಿವೇಶನಗಳ ಸಮಸ್ಯೆ, ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ, ಬಡವರ ಅಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ ಒತ್ತಾಯ, ವೃದ್ಯಾಪ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಲಾಯಿತು.ತಾಲೂಕಿನ ನೆಲ್ಯಾಡಿ, ಬಳ್ಪ, ಕಾಣಿಯೂರು, ಎಡಮಂಗಲ, ಸುಬ್ರಹ್ಮಣ್ಯ, ಸವಣೂರು, ಆಲಂಕಾರು, ರಾಮಕುಂಜ ಸೇರಿದಂತೆ ಹಲವು ಗ್ರಾಮ ಪಂಚಾಯತ್ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಆಯಾ ಗ್ರಾ..ಪಂ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು .ಈ ಸಂದರ್ಭದಲ್ಲಿ ಸ್ಥಳೀಯ ಬಿಜಿಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.