






ಕಡಬ ಟೈಮ್ಸ್,ಪ್ರಮುಖ ಸುದ್ದಿ: ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು ಇತರೆ ಪ್ರವಾಸಿಗರಿಗೆ ಕಿರಿ ಕಿರಿಯುಂಟಾಗುವ ರೀತಿ ವರ್ತಿಸುತ್ತಿದ್ದ ಯುವಕರಿಗೆ ಬಣಕಲ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಮೂಡಿಗೆರೆ ತಾಲ್ಲೂಕು ದೇವರಮನೆ ಪ್ರವಾಸಿ ತಾಣದಲ್ಲಿ ವಾಹನಗಳಲ್ಲಿ ಧ್ವನಿವರ್ಧಕಗಳನ್ನು ಹಾಕಿಕೊಂಡು ವೇಗದ ಚಾಲನೆ ಮಾಡುತ್ತ, ಕೇಕೆ ಹಾಕುತ್ತಾ ಇತರರಿಗೆ ಕಿರಿ ಕಿರಿ ಉಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ೨೦ ಐಎಂವಿ ಪ್ರಕರಣಗಳನ್ನು ದಾಖಲಿಸಲಾಗಿದೆ.೫ ಲಘು ಪ್ರಕರಣಗಳು ಹಾಘೂ ೫ ಕೋಟ್ಪಾ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಬೇರೆಯವರಿಗೆ ತೊಂದರೆ ಆಗುವ ರೀತಿ ವರ್ತಿಸಿದರೆ ಇದೇ ರೀತಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.
ಕೆಲ ವಾರಗಳ ಹಿಂದೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ರಾತ್ರಿವೇಳೆ ಕೆಲವು ಯುವಕರು ರಸ್ತೆ ಬದಿ ವಾಹನ ನಿಲ್ಲಿಸಿಕೊಂಡು ಕುಣಿಯುತ್ತಾ ಕೇಕೆ ಹಾಕಿ ಇತರೆ ವಾಹನ ಸವಾರರಿಗೆ ತೊಂದರೆ ಉಂಟು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಹಲವು ಕಡೆಗಳಲ್ಲಿ ನೋ ಪಾರ್ಕಿಂಗ್ ಬೋರ್ಡ್‌ಗಳನ್ನು ಅಳವಡಿಸಿದ್ದಾರೆ. ಅಂತಹ ಸ್ಥಳಗಲ್ಲಿ ಕಿರಿಕಿರಿ ಮುಂದುವರಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.