




ಕಡಬ ಟೈಮ್ಸ್ (KADABA TIMES ): ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನ target_boy900 ಎಂಬ ಹೆಸರಿನ ಖಾತೆಯಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಯುವಕನ ಕೊಲೆಗೆ ಸಂಬಂಧಿಸಿದಂತೆ ಕೋಮುದ್ವೇಶವನ್ನುಂಟು ಮಾಡುವಂತಹ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದ್ದು ಕಡಬ ಠಾಣೆಯಲ್ಲಿ ಪ್ರಕರಣದಾಖಲಾಗಿದೆ
ಕಾನೂನು
ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ದಿನಾಂಕ: 02.06.2025 ರಂದು ಕಡಬ
ಪೊಲೀಸ್ ಠಾಣಾ ಅ.ಕ್ರ 40/2025 ಕಲಂ: 55,353(2) r/w 103 BNS-2023ರಂತೆ ಪ್ರಕರಣ ದಾಖಲಿಸಿಕೊಂಡು
ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುತ್ತಿದೆ.
ದ.ಕ
ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ತರುವ ನಿಟ್ಟಿನಲ್ಲಿ
ಕೋಮು ಪ್ರಚೋದಕ ಸುದ್ದಿ ಹರಡುವ ಸಾಮಾಜಿಕ ಜಾಲತಾಣಗಳ ವಿರುದ್ದ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.