






ಕಡಬ ಟೈಮ್ಸ್, ಸ್ಥಳೀಯ ಸುದ್ದಿ: ಲೋಕಸಭಾ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಕಡಬ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಚರಿಸಲಾಯಿತು.
ಈ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಫೈಝಲ್ ಕಡಬ ನೇತೃತ್ವದಲ್ಲಿ ಕಳಾರ ಮತ್ತು ಮೌಲಾನಾ ಆಝಾದ್ ಎರಡು ಶಾಲೆಯ ಸುಮಾರು ತೊಂಭತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಸಿಹಿ ಹಂಚಲಾಯಿತು.
ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ, ಮಾಜಿ ಜಿ.ಪಂ ಸದಸ್ಯ ಪಿ.ಪಿ ವರ್ಗೀಸ್, ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸತೀಶ್ ನಾಯ್ಕ್, ಕಾರ್ಯದರ್ಶಿ ಶೆರೀಫ್ ಕಡಬ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.