ಸುಳ್ಯ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿ ತೀವ್ರ ರಕ್ತಸ್ರಾವದಿಂದ ಉಸಿರು ನಿಲ್ಲಿಸಿದ ತಾಯಿ

ಸುಳ್ಯ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿ ತೀವ್ರ ರಕ್ತಸ್ರಾವದಿಂದ ಉಸಿರು ನಿಲ್ಲಿಸಿದ ತಾಯಿ

Kadaba Times News

 ಕಡಬ  ಟೈಮ್ಸ್(KADABA TIMES):  ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾದ ಮಹಿಳೆ ಹೆರಿಯಾದ ಬಳಿಕ ತೀವ್ರ  ರಕ್ತಸ್ರಾವದಿಂದ ಸಾವನ್ನಪ್ಪಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಸುಳ್ಯ  ಸಂಪಾಜೆ ಗ್ರಾಮದ ಬಾಬು ಎಂಬವರ ಪುತ್ರಿ, ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ನಂತರದಲ್ಲಿ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ. 

 

ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ ದಂಪತಿ ಪುತ್ರಿಯಾದ ಮಧುರಾ ಆರು ವರ್ಷಗಳ ಹಿಂದೆ  ಬೆಳ್ತಂಗಡಿಯ ನಾರಾವಿ ಗ್ರಾಮದ ನೂಜೋಡಿ ಮನೆ ನಿವಾಸಿ ಶೇಖರ ಮಲೆಕುಡಿಯ ಅವರೊಂದಿಗೆ ವಿವಾಹವಾಗಿದ್ದರು.  ಮಧುರಾರಿಗೆ ಮೂರುವರೆ ವರ್ಷದ ಗಂಡು ಮಗುವಿದ್ದು, ಎರಡನೆ ಮಗುವಿನ ಹೆರಿಗೆಗಾಗಿ ಜೂ.2ರಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು


ಜೂ.3ರಂದು ಸಂಜೆ 6.45ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಅವರಿಗೆ ರಾತ್ರಿ 9 ಗಂಟೆಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ತಕ್ಷಣ ಎಚ್ಚೆತ್ತ ವೈದ್ಯರು   ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ರಾತ್ರಿ 11.30ಕ್ಕೆ ಕರೆತಂದು ದಾಖಲಿಸಿಲಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 12.37ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top