ಜ್ಯೋತಿಷಿಯನ್ನು ಧರ್ಮಸ್ಥಳದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಜ್ಯೋತಿಷಿಯನ್ನು ಧರ್ಮಸ್ಥಳದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kadaba Times News
0

 ಕಡಬ ಟೈಮ್ಸ್ (KADABA TIMES): ಶಿಕ್ಷೆ ಜಾರಿಯಾಗಿ ತಲೆಮರೆಸಿಕೊಂಡಿದ್ದ ಜ್ಯೋತಿಷ್ಯ ವೃತ್ತಿಯನ್ನು ಮಾಡುತ್ತಿರುವ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಜೂನ್ 16 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.



ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ನಿವಾಸಿ ಜ್ಯೋತಿಷ್ಯ ವೃತ್ತಿಯನ್ನು ಮಾಡುತ್ತಿರುವ ರಾಜೇಶ್.ಆರ್.ಶೆಣೈ (48) ಎಂಬಾತನಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯ 368/2021 ರಲ್ಲಿ ಶಿಕ್ಷೆ ವಿಧಿಸಿತ್ತು. ಬೆಳ್ತಂಗಡಿ ನ್ಯಾಯಾಲಯದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.


ಧರ್ಮಸ್ಥಳ ಪೊಲೀಸರು ಜೂ.16 ರಂದು ಧರ್ಮಸ್ಥಳ ಬಳಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಧೀಶರು ಆರೋಪಿಗೆ ಒಂದು ಲಕ್ಷದ ಎಪ್ಪತೈದು ಸಾವಿರದ ನೂರ ಐವತ್ತು (1,79,150) ರೂಪಾಯಿ ದಂಡವನ್ನು ಪಾವತಿಸಿ ಮತ್ತು ಮೂರು(3) ತಿಂಗಳ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.


ಬಂಟ್ವಾಳ ಉಪ ವಿಭಾಗದ ಉಪ ಅಧೀಕ್ಷಕ ವಿಜಯ್ ಪ್ರಸಾದ್ ನಿರ್ದೇಶನದಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top