






ಕಡಬ ಟೈಮ್ಸ್ , ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿದ ಪ್ರಕರಣದ ಸಂತ್ರಸ್ತೆ ಯುವತಿ ಜೂ.27ರಂದು ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ತಿಳಿದು ಬಂದಿದೆ.
ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ (21ವ) ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಜೂ.25ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ನಡುವೆ ಯುವತಿ ಜೂ .27ರಂದು ರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ರಾತ್ರಿ ಗಂಟೆ ಸುಮಾರಿಗೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದಾರೆ.
ಆರೋಪಿಗಾಗಿ ಶೋಧ: ಯುವತಿಗೆ ವಂಚನೆ ಪ್ರಕರಣ ದಾಖಲಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸರ ತಂಡವೊಂದು ಆರೋಪಿಗಾಗಿ ನಿರಂತರ ಹುಡುಕಾಟದಲ್ಲಿದೆ.