






ಕಡಬ ಟೈಮ್ಸ್ ,ಪ್ರಮುಖ ಸುದ್ದಿ: ಕಡಬ: ಪೊಲೀಸರು ಹಿಂದೂ ಕಾರ್ಯಕರ್ತರ ಮನೆಗೆ ರಾತ್ರಿ ತೆರಳಿ ಜಿಪಿಎಸ್ ಫೋಟೋ ತೆಗೆದ ಬಳಿಕದ ಬೆಳವಣಿಗೆಯಲ್ಲಿ ನಡೆದ ಘಟನೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಬುಧವಾರ ಸಂಜೆ ಕಡಬಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಮoಗಳೂರಿಗೆ ಆಗಮಸಿರುವ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು,
ಪುತ್ತೂರಿಗೆ ಆಗಮಿಸಿ ಬಳಿಕ ರಾತ್ರಿ ಕಡಬಕ್ಕೆ ಬಂದಿದ್ದಾರೆ. ಮಾನವ ಹಕ್ಕು ಆಯೋಗದ ಡಿವೈಎಸ್.ಪಿ ಮನಿಂದರ್ ಗಿಲ್ ನೇತೃತ್ವದ
ಅಧಿಕಾರಿಗಳ ತಂಡ ಕೋಡಿಂಬಾಳದಲ್ಲಿರುವ ವಿಹಿಪಂ ಅಧ್ಯಕ್ಷ
ರಾಧಕೃಷ್ಣ ಕೋಲ್ಪೆ ಅವರ ಮನೆಯಲ್ಲಿ ಚರ್ಚೆ ನಡೆಸಿದ್ದಾರೆ.
ದ.ಕ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಯ ಬಳಿಕ ಕಾನೂನು
ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನೂತನ ಪೊಲೀಸ್
ವರಿಷ್ಠಾಧಿಕಾರಿ ಡಾ.ಅರುಣ್ ಕೆ ಅವರ ಸೂಚನೆ ಮೇರೆಗೆ ಪೊಲೀಸರು ವಿವಿಧ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಪ್ರಮುಖರ ಮಾಹಿತಿಯನ್ನು ಸಂಗ್ರಹಿಸಲು
ಪ್ರಾರಂಭಿಸಿದ್ದರು . ಕಡಬದಲ್ಲಿಯೂ ರಾತ್ರಿ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡವರ ಮನೆಗೆ ತೆರಳಿ ಜಿ.ಪಿಎಸ್
ಫೋಟೋ ತೆಗದುಕೊಂಡು ಹೋಗಿದ್ದರು.
ಪೋಲೀಸರ ನಡೆಯಿಂದ ಹಿಂದೂ ಕಾರ್ಯಕರ್ತರ ಮನೆಯಲ್ಲಿ ಆತಂಕ ಸೃಷ್ಠಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಪೋಲೀಸರ ನಡೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ಸಲ್ಲಿಸಿದ್ದರು.ಅನುಮತಿ ರಹಿತವಾಗಿ ಪ್ರತಿಭಟನೆಗೆ ಮುಂದಾದ ಹಿನ್ನೆಲೆ ಪ್ರತಿಭಟನೆ ನಿರತರಾದವರ ಮೇಲೆ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದರು. ಈ ವಿಚಾರ ಖಂಡಿಸಿ ಕಡಬ ಠಾಣೆಯ ಮುಂಭಾಗದ ರಸ್ತೆ ಬದಿಯಲ್ಲಿ ಬಿಜೆಪಿ ಹಾಗೂ ಹಿಂದೂ ಪರಿವಾರ ಸಂಘಟನೆಯವರು ಪ್ರತಿಭಟನೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಕೂಡಾ ದ್ವೇಷದ ಭಾಷಣದ ಆರೋಪದಲ್ಲಿ ವಿಶ್ವಹಿಂದೂ ಪರಿಷತ್ ಮುಖಂಡ ನವೀನ್ ನೆರಿಯಾ ವಿರದ್ಧ ಪ್ರಕರಣ ದಾಖಲಾಗಿತ್ತು.
ರಾಜ್ಯದಲ್ಲಿ ಹಿಂದೂಗಳ ಮೇಲೆ ಸರಕಾರ ಪ್ರೇರಿತ ಪೊಲೀಸ್
ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ
ಸರಕಾರದ ವಿರುದ್ಧ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಹೋರಾಟ ನಡೆಸಿದ್ದವು. ಕೇಂದ್ರ ಮಾನವ ಹಕ್ಕುಗಳ
ಆಯೋಗಕ್ಕೂ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ
ಇದೀಗ ಬುಧವಾರ ಕರ್ನಾಟಕಕ್ಕೆ ಆಗಮಿಸಿದ್ದ ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಕಡಬಕ್ಕೆ ಆಗಮಿಸಿ ಹಿಂದೂ ಕಾರ್ಯಕರ್ತರಿಂದ ಎಲ್ಲಾ ಬೆಳವಣಿಗೆಗಳ
ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ
ಡಾ|ಕೃಷ್ಣ ಪ್ರಸಾದ್, ಕಡಬ ಪ್ರಖಂಡದ ಪ್ರಮುಖರಾದ ರಾಧಾಕೃಷ್ಣ ಕೋಲ್ಪೆ, ಪ್ರಮೋದ್ ರೈ, ಜಂಯತ್ ಕಲ್ಲುಗುಡ್ಡೆ
ಮತ್ತಿತರರು ಉಪಸ್ಥಿತರಿದ್ದರು.