




ಕಡಬ ಟೈಮ್ಸ್, ಆಲಂಕಾರು : ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಮಾಹಿತಿ ಕಾರ್ಯಾಗಾರವು ಜೂ.18ರಂದು ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿ ನಲ್ಲಿ ನಡೆಯಿತು.
ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ
ದಯಾನಂದ ರೈ ಮನವಳಿಕೆ ಕಾರ್ಯಾಗಾರ ಉದ್ಘಾಟಿಸಿದರು. ಬಳಿಕ ಮಾತನಾಡಿ, ವಿದ್ಯಾರ್ಥಿಗಳು ತಂಬಾಕಿನಿಂದ ದೂರವಿದ್ದು, ನೆಮ್ಮದಿಯ ಜೀವನವನ್ನು
ನಡೆಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕ
ಹಾಗೂ ವಕೀಲರಾ ಮನೋಹರ ಎ ಮಾತನಾಡಿ, ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕೋಸ್ಕರ ಜೀವನವನ್ನು ವ್ಯರ್ಥ ಮಾಡದೇ
ವಿದ್ಯಾರ್ಥಿ ದೆಸೆಯಲ್ಲಿ ಸಾಧನೆಯನ್ನು ಮಾಡಬೇಕು. ಅದೆಷ್ಠೋ ಯುವ ಜನಾಂಗ ದುಶ್ಟಟಕ್ಕೆ ಬಲಿಯಾಗಿ ತಮ್ಮ
ಬದುಕನ್ನೇ ಹಾಳು ಮಾಡಿಕೊಂಡವರು ನಮ್ಮ ಸಮಾಜದ ಮುಂದೆ ಕಾಣುತ್ತಾರೆ, ಇದರಿಂದ ನಾವೆಲ್ಲಾ ದೂರವಿರೋಣ
ಎಂದರು.
ಕಡಬದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಕೆ ಸವಣೂರು ಸಮಾರಂಭದ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಲಂಕಾರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಇಂದು ಶೇಖರ ಶೆಟ್ಟಿ, , ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜ್ ನ ಆಡಳಿತಾಧಿಕಾರಿ ಶ್ರೀಪತಿ ರಾವ್, ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲೆ ರೂಪ ಜಿ, ಪ್ರೌಢಶಾಲಾ ವಿಭಾಗದ ಮುಖ್ಯಗುರು ನವೀನ್ ಕುಮಾರ್ ರೈ, ಆಲಂಕಾರು ಒಕ್ಕೂಟದ ಅಧ್ಯಕ್ಷೆ ಶಾರದ ಶುಭ ಹಾರೈಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಕಡಬ ಹಾಗೂ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರು ಇವುಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.