




ಕಡಬ ಟೈಮ್ಸ್ ,ಪ್ರಮುಖ ಸುದ್ದಿ: ರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಚುರುಕುಮುಟ್ಟಿಸುವ ಉದ್ದೇಶದಿಂದ ವರ್ಗಾವಣೆ ಪರ್ವ ಜೋರಾಗಿದ್ದು, ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕೆಲವು ಕಾರ್ಯ ನಿರ್ವಾಹಕ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.
ಅದರಂತೆ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಹುದ್ದೆಗೆ ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ಇಬ್ರಾಹಿಂಪುರ ಎಂಬವರನ್ನು ವರ್ಗಾಯಿಸಿ ಆದೇಶಿಸಲಾಗಿದೆ.
ಉಡುಪಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀಮತಿ ವಿಜಯ ರವರನ್ನು ಮುಲ್ಕಿ ತಾಲೂಕು ಪಂಚಾಯತ್ ಗೆ ವರ್ಗಾಯಿಸಿ ಆದೇಶಿಸಲಾಗಿದೆ.