




ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರ ಸಹಯೋಗದಲ್ಲಿ ಕಡಬ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಭೆಯು ಯೋಜನಾ ಕಚೇರಿಯಲ್ಲಿ ನಡೆಯಿತು.
ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ
“ತಾಲೂಕಿನಲ್ಲಿ ಭಜನಾ ಪರಿಷತ್ತುಗಳು ಧಾರ್ಮಿಕ ನಂಬಿಕೆ, ಶಿಷ್ಟಾಚಾರ ಹಾಗೂ ಸಮಾಜದ ಸಾಂಸ್ಕೃತಿಕ ಶಕ್ತಿ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಪಠ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ಮರುಸೃಜಿಸುವ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.
ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತ್ಯನಾರಾಯಣ ಹೆಗಡೆ, ಯುವಜನರನ್ನು ಭಜನಾ ಮಂಡಳಿಗಳೊಂದಿಗೆ ತೊಡಗಿಸಿಕೊಳ್ಳಬೇಕು, ಭಕ್ತಿಯೊಂದಿಗೇ ಶಿಸ್ತು, ಸಂಸ್ಕೃತಿ ಕಲಿಸುವ ವೇದಿಕೆ” ಎಂದು ಹೇಳಿದರು. ಭಜನಾ ಪರಿಷತ್ತಿನ ಸಮನ್ವಯಾಧಿಕಾರಿ ಸಂತೋಷ್ ಅವರು ಸೆಪ್ಟಂಬರ್ 14 ರಿಂದ 21 ರವರೆಗೆ ಧರ್ಮಸ್ಥಳದಲ್ಲಿ ನಡೆಯಲಿರುವ ಭಜನಾ ಕಮ್ಮಟದ ಬಗ್ಗೆ ಮಾಹಿತಿಯನ್ನು ನೀಡಿದರು.
ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಂದರ್ ಗೌಡ ಒಗ್ಗು, ಅಧ್ಯಕ್ಷತೆ ವಹಿಸಿದ್ದರು.
ವಲಯ ಮೇಲ್ವಿಚಾರಕರು, ಪರಿಷತ್ತಿನ ಪದಾಧಿಕಾರಿಗಳು ಭಾಗವಹಿಸಿದ್ದರು. ಎಸ್
ಕೆ ಆರ್ ಡಿಫಿ ಕಡಬ ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.