




ಕಡಬ ಟೈಮ್ಸ್, (KADABA TIMES) ರಾಜಕೀಯ ಸುದ್ದಿ: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಕಡಬ ತಾಲ್ಲೂಕು ಮತ್ತು ಕಡಬ ಪಟ್ಟಣ ಪಂಚಾಯಿತಿ ಅನುಷ್ಠಾನಗೊಳಿಸಿ ಜನರ ಬೇಡಿಕೆಯನ್ನು ಈಡೇರಿಸಿದೆ. ಇದೀಗ ಪಟ್ಟಣ ಪಂಚಾಯಿತಿಗೆ ಚುನಾವಣೆ ಘೋಷಣೆಯಾಗಿದ್ದು, ಮೊದಲ ಚುನಾವಣೆಯಲ್ಲಿ ಬಿಜೆಪಿ ಗದ್ದುಗೆ ಹಿಡಿಯಲು ಕಾರ್ಯಕರ್ತರ ಅವಿರತ ಶ್ರಮ ಅಗತ್ಯ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಕಡಬ ಮಹಾಶಕ್ತಿ ಕೇಂದ್ರದ ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಂಕಲ್ಪ ಕಡಬದಲ್ಲಿ ಜುಲೈ21 ರಂದು ಹಮ್ಮಿಕೊಂಡಿದ್ದ ಬಿಜೆಪಿ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಪಕ್ಷದ ತೀರ್ಮಾನದಂತೆ ನಡೆಯುತ್ತದೆ. ಅಭ್ಯರ್ಥಿ ಯಾರೇ ಆದರೂ ಗೆಲ್ಲಿಸಲು ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಬೇಕು ಎಂದರು.
ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ
ಪ್ರತಾಪಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಶಾಸಕ ಡಾ.ಭರತ್ ಶೆಟ್ಟಿ, ಮುಖಂಡ ಎಸ್. ಅಂಗಾರ,
ಕಡಬ ಪಟ್ಟಣ ಪಂಚಾಯಿತಿ ಚುನಾವಣೆ ನಿರ್ವಹಣಾ ಸಮಿತಿಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿದರು.
ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ, ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಎನ್.ಕೆ., ಪ್ರಧಾನ ಕಾರ್ಯದರ್ಶಿ ಆಶೋಕ್ ಕುಮಾರ್, ಕಡಬ ಪಟ್ಟಣ ಪಂಚಾಯಿತಿ ಚುನಾವಣಾ ನಿರ್ವಹಣಾ ಸಮಿತಿಯ ಬಾಲಕೃಷ್ಣ ಬಾಣಜಾಲು ಭಾಗವಹಿ ಸಿದ್ದರು. ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ವಂದಿಸಿದರು. ವಿನಯ ಕುಮಾರ್ ಕಂದ ನಿರೂಪಿಸಿದರು.
A BJP Sankalp Samavesha (pledge meeting) was held in Kadaba on July 21 ahead of the upcoming Kadaba Town Panchayat elections. BJP District President Satish Kumpala urged party workers to work hard to ensure victory in the party’s first town panchayat election. He emphasized that candidate selection would be based on party decisions, and regardless of the candidate, all workers must strive for a win. The event was attended by MLA Bhagirathi Murulya, MLCs Pratap Simha Nayak and Kishore Kumar Puttur, MLA Dr. Bharath Shetty, leader S. Angara, and election committee member Krishna Shetty.