




ದ.ಕ.ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ನಾಳೆ(ಜು.25) ರಂದು ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.