




ಕಡಬ ಟೈಮ್ಸ್, ಪ್ರಮುಖ ಸುದ್ದಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಪುತ್ತೂರು ಬೆದ್ರಾಳ ನಿವಾಸಿ ಧನಂಜಯ ವಾಗ್ಲೆ (75) ಅವರು ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮೂಲತಃ ಸುಳ್ಯದ ಕೋಡಿಯಾಲಬೈಲಿನ ಸ್ವಯಂಸೇವಕರಾಗಿದ್ದರು. ಸುಳ್ಯ ತಾಲೂಕಿನಲ್ಲಿ ಜನಸಂಘ ಹಾಗೂ ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಸುಮಾರು 20 ವರ್ಷಗಳ ಕಾಲ ಬಿಜೆಪಿಯ ಪೂರ್ಣಾವಧಿ ಕಾರ್ಯಕರ್ತರಂತೆ ಕಾರ್ಯ ನಿರ್ವಹಿಸಿದ್ದರು.
ತುರ್ತು ಪರಿಸ್ಥಿತಿ, ಅಯೋಧ್ಯೆಯ ರಾಮ ಜನ್ಮಭೂಮಿ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ವಾಗ್ಲೆಯವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು ಸಂತಾಪ ಸೂಚಿಸಿದ್ದಾರೆ.