




ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು 6ನೇ ಗುರುತಿನ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು ಇದೀಗ ಬುರುಡೆ ಪತ್ತೆಯಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಿಗಳು ಅದನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಿದ್ದಾರೆ.