




ಕಡಬ ಟೈಮ್ಸ್,ಪ್ರಮುಖ ಸುದ್ದಿ: ಕಡಬ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಇಂದು (ಜುಲೈ 15 ರಂದು) ರಜೆ ಘೋಷಿಸಲಾಗಿದೆ ಎಂದು ತಹಶಿಲ್ದಾರ್ ಪ್ರಭಾಖರ ಕಜೂರೆ ಪ್ರಕಟಣೆ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಜು.17ರವರೆಗೆ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಕಡಲು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರು ಕಡಿಲಿಗೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.