




ಕಡಬ ಟೈಮ್ಸ್, ( Kadaba times):ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಸಮೀಪದ ಚಾರ್ವಾಕ ಗ್ರಾಮದಲ್ಲಿ ನಡೆದಿದೆ.
ಕಂಡಿಗ ವೀರಪ್ಪ ಗೌಡರ ಪುತ್ರ ದಾಮೋಧರ ಗೌಡ ಆತ್ಮಹತ್ಯೆ ಮಾಡಿಕೊಂಡವರು.
ಆಗಾಗ ಅನಾರೋಗ್ಯ ಒಳಗಾಗುತ್ತಿದ್ದ ಇವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸೋಮವಾರ ಮುಂಜಾವಿನ ವೇಳೆ ಬೇಗ ಎದ್ದು ಯಾರಲ್ಲಿಯೂ ಮಾತನಾಡದೆ ಹೊರ ಹೋಗಿ ತನ್ನ ಸಹೋದರ ಹೊಸದಾಗಿ ನಿರ್ಮಾಣ ಮಾಡುತ್ತಿದ್ದ ಮನೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ. ಸಹೋದರ ವೆಂಕಟೇಶ್ ನೀಡಿದ ದೂರಿನಂತೆ ಕಡಬ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.