BIG BREAKING: ಸಾಕ್ಷಿ ದೂರುದಾರನನ್ನು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಕರೆದೊಯ್ದ ಎಸ್ಐಟಿ

BIG BREAKING: ಸಾಕ್ಷಿ ದೂರುದಾರನನ್ನು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಕರೆದೊಯ್ದ ಎಸ್ಐಟಿ

Kadaba Times News
0

 ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಮಂಗಳವಾರ ಸ್ಥಳ ಮಹಜರಿಗಾಗಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಕರೆದೊಯ್ದಿದ್ದಾರೆ.



ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ್ದು, ಅದರಂತೆ ಎಸ್..ಟಿ ಅಧಿಕಾರಿಗಳ ತಂಡವು ಇಂದು (.26ರಂದು) ಬೆಳಗ್ಗೆ 9:20ಕ್ಕೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ತಿಮರೋಡಿ ಮತ್ತು ಅವರ ಸಹೋದರ ಮೋಹನ್ ಶೆಟ್ಟಿಯವರ ಮನೆಗೆ ತೆರಳಿದ್ದಾರೆ.

 

ಬೆಳ್ತಂಗಡಿ ನ್ಯಾಯಾಧೀಶರಿಂದ .25ರಂದು ಸರ್ಚ್ ವಾರೆಂಟ್ ಪಡೆದುಕೊಂಡಿರುವ ಎಸ್ಐಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಜೊತೆಯಲ್ಲಿ ಕರೆದುಕೊಂಡು ತಿಮರೋಡಿ ಮನೆಗೆ ತೆರಳಿದ್ದು, ಮಹಜರು ನಡೆಸುತ್ತಿದ್ದಾರೆ.

 

ಬುರುಡೆ ಪ್ರಕರಣದಲ್ಲಿ ಆರೋಪಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಅಶ್ರಯ ನೀಡಿದ್ದರಿಂದ ಅದಕ್ಕೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ದಾಳಿ ನಡೆಯುತ್ತಿದೆ ಎನ್ನಲಾಗಿದೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top