



ಕಡಬ ಪಟ್ಟಣ :ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಮಡ್ಯಡ್ಕ-ಬೊಳ್ಳೆಕುಕ್ಕು-ಚಾಕೋಟೆ ರಸ್ತೆ ತೀರ ಹದಗೆಟ್ಟಿದ್ದು ಸಮರ್ಪಕವಾಗಿ ದುರಸ್ತಿಗೊಳಿಸದಕ್ಕೆ ವಾರ್ಡಿನ ಜನರು ಆಕ್ರೋಶ ಹೊರಹಾಕಿದ್ದರು. ಜೊತೆಗೆ ಪ.ಪಂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ್ದರು.
ಈ
ಬಗ್ಗೆ ಇಂದು (ಆಗಸ್ಟ್ 13 ರಂದು) ಕಡಬ ಟೈಮ್ಸ್ ವರದಿ ಪ್ರಕಟಿಸಿದ ಬೆನ್ನಲ್ಲೇ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮಳೆಗಾಲ ಮುಗಿಯುವ ತನಕ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆಯನ್ನು ದುರಸ್ತಿ ಪಡಿಸುವ ಭರವಸೆ
ನೀಡಿದ್ದಾರೆ.ಅಲ್ಲದೆ ಮುಂದಿನ ದಿನಗಳಲ್ಲಿ ನಗರೋತ್ಥಾನ ಯೋಜನೆಯಲ್ಲಿ ಅನುದಾನವಿರಿಸಿ ಸಮರ್ಪಕ ರಸ್ತೆ
ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು
ಚುನಾವನಾ ಬಹಿಷ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಜನರೊಂದಿಗೆ ಮಾತನಾಡಿದ ಪ.ಪಂ ಮುಖ್ಯಾಧಿಕಾರಿಯವರು
ಮತದಾನ ನಮ್ಮ ಹಕ್ಕು ಅದನ್ನು ಎಲ್ಲರೂ ಚಲಾಯಿಸಬೇಕು. ಈ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಮಗ್ರ
ಊರಿನ ಬೆಳವಣಿಗೆಗೆ ಸಹಕರಿಸಬೇಕು ಎಂದರು.
ಕಡಬ
ಪಟ್ಟಣ ಪಂಚಾಯತ್ ಇಂಜಿನಿಯರ್ ಶಿವಕುಮಾರ್, ಮುಖ್ಯಾಧಿಕಾರಿ ಲೀಲಾವತಿ, ಸಿಬ್ಬಂದಿ ಹರೀಶ್ ಜೊತೆಯಲ್ಲಿದ್ದರು.
ರಸ್ತೆಯ ಅವ್ಯವಸ್ಥೆಯಿಂದಾಗಿ ಈ ಭಾಗದ ಜನರು ಬಾಡಿಗೆಗೆ ಆಟೋ ಕರೆದರೂ ಬರುತ್ತಿಲ್ಲ, ತುರ್ತು ಸಂದರ್ಭಕ್ಕೂ ಅಡಚಣೆಯಾಗುತ್ತಿದೆ ಎಂದು ಅಲ್ಲಿನ ನಿವಾಸಿಗಳು ದೂರುತ್ತಿದ್ದಾರೆ. ಕಳೆದ ವರ್ಷ ಮಳೆಗಾಲದ ಸಂದರ್ಭದಲ್ಲಿ ಹದಗೆಟ್ಟ ರಸ್ತೆಯನ್ನು ದುರಸ್ತಿ ಪಡಿಸುವಂತೆ ಆಗ್ರಹಿಸಲಾಗಿತ್ತು. ಇನ್ನು ಪ.ಪಂ ಚುನಾವಣೆ ಹಿನ್ನೆಲೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತಯಾಚನೆಗೆ ಬರುತ್ತಿದ್ದು ಅವರ ರಸ್ತೆ ವಿಚಾರವಾಗಿ ವಾರ್ಡು ನಿವಾಸಿಗಳು ಪ್ರಶ್ನಿಸಿದ್ದರು