




ಕಡಬ ಟೈಮ್ಸ್ (KADABA TIMES): ಹುಲ್ಲಿಗೆ ಸಿಂಪಡಿಲು ತಂದಿರಿಸಿದ್ದ ಔಷಧಿ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಹಿರೇಬಂಡಾಡಿ ಗ್ರಾಮದಲ್ಲಿ ನಡೆದಿದೆ.
ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ಗ್ರಾಮದ ಕಾಚಿಲ ನಿವಾಸಿ ಐತ್ತಪ್ಪ ಗೌಡ(70ವ.)ಮೃತಪಟ್ಟವರು.
ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ತಮ್ಮ ಮನೆಯಲ್ಲಿ ಹುಲ್ಲಿಗೆ ಸಿಂಪಡಿಸಲು ತಂದಿದ್ದ ಜೌಷಧಿಯನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು ಎನ್ನಲಾಗಿದೆ.
ಮನೆಯವರು ಗಮನಿಸಿ ಚಿಕಿತ್ಸೆ ಬಗ್ಗೆ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲು ಮಾಡಿಕೊಂಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮೃತರ
ಪುತ್ರ ರಿತೇಶ್ ಕುಮಾರ್ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.