




ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6ರಂದು ಸಂಜೆ ವೇಳೆ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಕನ್ಯಾಡಿ
ನಿವಾಸಿ, ಜೀಪು ಚಾಲಕ ಸೋಮನಾಥ ಸಫಲ್ಯ (48) ಬಂಧಿತ ಆರೊಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ
ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ
189(2),191(2),115(2),324(5),352,307 ಜೊತೆಗೆ
190 BNS ಅಡಿಯಲ್ಲಿ ಸುಮಾರು 15 ರಿಂದ 50 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ
ಸಂಬಂಧಿಸಿದಂತೆ ಆರೋಪಿಗಳನ್ನು ಗುರುತಿಸಿದ ಪೊಲೀಸರು ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಜೀಪು ಚಾಲಕ ಸೋಮನಾಥ ಸಪಲ್ಯನನ್ನು ಆ.7ರಂದು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಕೊಕ್ಕಡದಲ್ಲಿ
ಬಂಧಿಸಿರುವುದಾಗಿ ತಿಳಿದುಬಂದಿದೆ. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.