




ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ
ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ
ಮಾಹಿತಿ ಲಭ್ಯವಾಗಿದೆ.
ಶುಕ್ರವಾರ ಬೆಳಿಗ್ಗೆ ದೂರುದಾರನನ್ನು ಎಸ್.ಐ.ಟಿ ಕಚೇರಿಗೆ
ಕರೆದೊಯ್ದಿದ್ದ ಅಧಿಕಾರಿಗಳು ತೀವ್ರ ವಿಚಾರಣೆಯ ಬಳಿಕ ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.